ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಉದ್ದೇಶ ಈಡೇರುವುದಕ್ಕೆ ನಾವು ಬಿಡುವುದಿಲ್ಲ :ಎಚ್.ಡಿ ದೇವೇಗೌಡ -Vishwanews24
ಬೆಂಗಳೂರು: ದೇಶಾದ್ಯಂತ ಜಾರಿಗೆ ಮಾಡಲೊರಟ ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ.
ನಗರದ ಜಾತ್ಯತೀತ ಜನತಾ ದಳ(ಜೆಡಿಎಸ್) ಕಚೇರಿ ಜೆಪಿ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಮಾಜಿ ಪ್ರಧಾನಿ ದೇವೇಗೌಡು ಭಾಗಿಯಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಷ್ಟ್ರೀಯ ನಾಗರಿಕ ನೋಂದಣಿ(ಎನ್ಆರ್ಸಿ) ಮತ್ತು ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ಜೆಡಿಎಸ್ ಹೋರಾಟ ಮುಂದುವರಿಯಲಿದೆ ಎಂದರು.
ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೊಳಿಸಬೇಡಿ ಎಂದು ಪ್ರತಿಭಟನಾಕಾರರು ಒತ್ತಾಯ ಮಾಡುತ್ತಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಲು ಮುಂದಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಲವು ನಿರ್ಧಾರಗಳು ದೇಶದ ಹಿತಾಸಕ್ತಿಗೆ ಧಕ್ಕೆಯುಂಟು ಮಾಡುತ್ತಿವೆ ಎಂದು ಕಿಡಕಾರಿದರು.

