ಬಿಜೆಪಿಗೂ ಡಿಕೆಶಿ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ : ನಳೀನ್ ಕುಮಾರ್ ಕಟೀಲ್ -Vishwanews24
ಹಾಸನ: ಬಿಜೆಪಿಗೂ ಡಿಕೆಶಿ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ, ಕಾನೂನು ಎಂಬುದು ಎಲ್ಲರಿಗೂ ಒಂದೇ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆ ಎನ್ನುತ್ತಾರೆ. ಹಾಗಾದರೆ ಇಡಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಟ್ಟು ದೋಷ ಮುಕ್ತರಾಗಬೇಕಿತ್ತು. ಅದನ್ನು ಬಿಟ್ಟು ಬೀದಿಗೆ ಬಂದು ಕಲ್ಲು ಎಸೆಯುವುದು ಎಷ್ಟು ಸರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.)ದಲ್ಲಿ ಎರಡು ವರ್ಷಗಳ ಹಿಂದೆಯೇ ಪ್ರಕರಣ ದಾಖಲಾಗಿದೆ. ಆಗಲೇ ದಾಖಲೆಗಳನ್ನು ಸಲ್ಲಿಸಬೇಕಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಹಾಗಾಗಿ ಅವರ ಬಂಧನ ಏಕಾಏಕಿಯಾಗಿ ಆದದ್ದಲ್ಲ. ಬಿಜೆಪಿಗೂ ಡಿಕೆಶಿ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ತನಿಖಾ ಸಂಸ್ಥೆಗೆ ಸಹಕಾರ ನೀಡಬೇಕು. ಹತ್ತಾರು ರಾಜಕಾರಣಿಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದರು.
ಗುರುರಾಜ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜನೆಗೊಂಡಿದ್ದ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಅವರು ಹಾಸನಕ್ಕೆ ಆಗಮಿಸಿದ್ದರು.
