ಬಿಜೆಪಿಗೆ ಸೇರ್ಪಡೆಯಾದ ಬಾಲಿವುಡ್ ನಟಿ ಇಶಾ ಕೊಪ್ಪಿಕ್ಕರ್ – Vishwanews24
ಮುಂಬೈ: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಬ್ಲಾಕ್ ಬಸ್ಟರ್ ಚಿತ್ರ ಸೂರ್ಯವಂಶ ದಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪಕ್ಷದ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಅವರನ್ನು ಬಿಜೆಪಿ ಮಹಿಳಾ ಟ್ರಾನ್ಸ್ ಪೋಟ್ ವಿಂಗ್ ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಇಶಾ ಕೊಪ್ಪಿಕ್ಕರ್, ಪಕ್ಷಕ್ಕೆ ಹಾರ್ದಿಕವಾಗಿ ಬರಮಾಡಿಕೊಂಡಿದ್ದಕ್ಕೆ ಧನ್ಯವಾದಗಳು. ರಾಷ್ಟ್ರ ಸೇವೆ ಮಾಡುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಇಶಾ ಕೊಪ್ಪಿಕರ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹಾಗೂ ಮರಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ.
