ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕಾರ -Vishwanews24
ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಿದ್ದಾರೆ.
ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು.
ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ, ಪ್ರತಾಪ ಸಿಂಹ, ಶಾಸಕರಾದ ಅಂಗಾರ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣಕ್ಕೆ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಳ್ಳಲು ಆಗಮಿಸಿದ್ದರು. ವೀರಗಾಸೆ, ಡೊಳ್ಳು ಕುಣಿತದೊಂದಿಗೆ ನಳಿನ್ ಕುಮಾರ್ ಅವರನ್ನು ಸ್ವಾಗತಿಸಲಾಯಿತು.
ಪದಗ್ರಹಣಕ್ಕೂ ಮುನ್ನ ಇಂದು ಬೆಳಗ್ಗೆ 9.30 ಕ್ಕೆ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಳಿನ್ ಕುಮಾರ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಸಭೆಯಲ್ಲಿ ನೂತನ ಸಚಿವರಾದ ಕೆ.ಎಸ್. ಈಶ್ವರಪ್ಪ, ಬಿ.ಶ್ರೀರಾಮುಲು, ಸಂಸದೆ ಶೋಭ ಕರಂದ್ಲಾಜೆ, ಸಿ.ಟಿ.ರವಿ, ಆರ್. ಅಶೋಕ್ ಸೇರಿದಂತೆ ಬಿಜೆಪಿಯ ನೂತನ ಸಚಿವರು, ಶಾಸಕರು ಭಾಗಿಯಾಗಿದ್ದರು.
