ಬಿಜೆಪಿಯ ರಾಷ್ಟ್ರವಾದ ಹಾಗೂ ಅಭಿವೃದ್ಧಿ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆ : ಅಣ್ಣಾಮಲೈ -Vishwanews24
ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಸಿಂಗಂ ಖ್ಯಾತಿಯ ಅಣ್ಣಾಮಲೈ -Vishwanews24
Former IPS officer Annamalai Kuppusamy joins BJP at party headquarters in Delhi in the presence of BJP national general secretary P Muralidhar Rao (left) & Tamil Nadu BJP president L Murugan (right). pic.twitter.com/zBK0C9ybkd
— ANI (@ANI) August 25, 2020
ನವದೆಹಲಿ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಸಿಂಗಂ ಖ್ಯಾತಿಯ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ ತಮ್ಮ ಜೀವನದ 2ನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ , ಬಿಜೆಪಿ ಶಾಲು ಹೊದಿಸಿ, ಗಣ್ಯರ ಸಮ್ಮುಖದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವುದರೊಂದಿಗೆ ಬಿಜೆಪಿಗೆ ಅಣ್ಣಾಮಲೈ ಸೇರ್ಪಡೆಯಾದರು.
ಇನ್ನು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡು ಮಾತನಾಡಿದ ಅಣ್ಣಾಮಲೈ, ಬಿಜೆಪಿಯ ರಾಷ್ಟ್ರವಾದ ಹಾಗೂ ಅಭಿವೃದ್ಧಿ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದಾಗಿ ಸ್ಷಷ್ಟಪಡಿಸಿದರು.
ಪ್ರಧಾನಿ ಮೋದಿ ಅವರ ಅಭಿವೃದ್ಧಿ ಪರ ರಾಜಕಾರಣ ಹಾಗೂ ದೇಶವನ್ನು ಅವರು ಮುನ್ನಡೆಸುತ್ತಿರುವ ರೀತಿ ನಿಜಕ್ಕೂ ಅನನ್ಯ ಎಂದಿರುವ ಅಣ್ಣಾಮಲೈ, ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ 21ನೇ ಶತಮಾನದ ಪ್ರಶ್ನಾತೀತ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.
ತಮಿಳುನಾಡಿಗೆ ಬಿಜೆಪಿಯ ಅವಶ್ಯಕತೆಯಿದ್ದು, ಅದರಂತೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಈ ವೇಳೆ ಅಣ್ಣಾಮಲೈ ಭರವಸೆ ನೀಡಿದರು.
