ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ – vishwanews24

Featured, ರಾಷ್ಟ್ರ ನ್ಯೂಸ್

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ

ನವದೆಹಲಿ : ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಅದರಂತೆ ನ್ಯಾಯಾಲಯವು ನಿಗದಿಪಡಿಸಿದ ಪ್ರಕಾರ ಜನವರಿ 21 ರೊಳಗೆ ಎಲ್ಲಾ 11 ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಆದೇಶಿಸಿದೆ.

2002ರ ಗುಜರಾತ್ ಗಲಭೆಯ ವೇಳೆ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು ಸುಪ್ರೀಂ ಕೋರ್ಟ್ ಶಿಕ್ಷೆಗೆ ಗುರಿಯಾಗಿದ್ದರು. ಆದರೆ ಆಗಸ್ಟ್ 14, 2023ರಂದು, ಅಪರಾಧಿಗಳನ್ನು ಗುಜರಾತ್ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದರು.

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ – vishwanews24

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ ಜನವರಿ 8ರಂದು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು.ಅಲ್ಲದೇ ಎಲ್ಲಾ ಹನ್ನೊಂದು ಅಪರಾಧಿಗಳಿಗೆ ಎರಡು ವಾರಗಳಲ್ಲಿ ಶರಣಾಗುವಂತೆ ನಿರ್ದೇಶಿಸಿತ್ತು.

ಕೋರ್ಟ್ ಆದೇಶ ಬರುತ್ತಿದ್ದಂತೆ ಹನ್ನೊಂದು ಮಂದಿ ಅಪರಾಧಿಗಳ ಪೈಕಿ ಮೂವರು ಅಪರಾಧಿಗಳು ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ಪೀಠವು ಅರ್ಜಿಗಳಿಗೆ ಅರ್ಹತೆಯ ಕೊರತೆಯಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ. ಮುಂದಿನ ಭಾನುವಾರದೊಳಗೆ ಅಂದರೆ ಜ.21 ರೊಳಗೆ ಎಲ್ಲ ಅಪರಾಧಿಗಳು ಜೈಲು ಅಧಿಕಾರಿಗಳಿಗೆ ವರದಿ ಮಾಡುವಂತೆ ಆದೇಶಿಸಿದೆ.

ಮಂಗಳೂರು: ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್‌ ಎಸ್‌.ಎಚ್‌. ಭಜಂತ್ರಿ ಅಮಾನತು – vishwanews24

Leave a Reply