ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ _ ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಇಂದು ಪ್ರಮಾಣ ವಚನ – Vishwanews24
ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ , ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಇಂದು
ಪ್ರಮಾಣ ವಚನ
ಪಾಟ್ನಾ: ಬಿಹಾರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಸಖ್ಯ ತೊರೆದ ಜೆಡಿಯು ನಾಯಕ ನಿತೇಶ್ ಕುಮಾರ್ “ಮುಖ್ಯಮಂತ್ರಿ” ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಜೊತೆಗೆ ಆರ್ ಜೆಡಿ ನೇತೃತ್ವದ ಮಹಾಘಟಬಂಧನದೊಂದಿಗೆ ಕೈ ಜೋಡಿಸಿ ಹೊಸ ಸರ್ಕಾರ ರಚನೆ ಹಕ್ಕು ಮಂಡಿಸಿದ್ದಾರೆ.
ಅದರಂತೆ ಅವರು ಬುಧವಾರ ಮಧ್ಯಾಹ್ನ 2 ಗಂಟೆಗೆ ಸತತ 8ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಪಡೆದುಕೊಳ್ಳಲಿದ್ದಾರೆ.
