ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

Featured, ರಾಜ್ಯ ನ್ಯೂಸ್

ಬೀದರ್ : ಮಳೆ ಆರ್ಭಟ – ಸಿಡಿಲು ಬಡಿದು ಯುವಕ ಸಾವು

ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ರಾಹುಲ್ ಭಾಸ್ಕರೆ (25) ಮೃತಪಟ್ಟ ಯುವಕ.

ರಾಹುಲ್ ಇಂದು ಮುಂಜಾನೆ ಕೆಲಸದ ನಿಮಿತ್ತ ಹೊಲಕ್ಕೆ ಹೋಗಿ ಮರಳಿ ಬರುತ್ತಿದ್ದ ವೇಳೆ ಗುಡುಗು ಸಹಿತ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಒಂದು ಮರದ ಕೆಳಗೆ ನಿಂತಿದ್ದರು. ಈ ವೇಳೆ ಸಿಡಿಲಿನ ಆಘಾತಕ್ಕೆ ಒಳಗಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

Leave a Reply