ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಕೊಡ ಹಿಡಿದು ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ – Vishwanews24
ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್ ಮಾಡಲು ಹೊರಟಿದೆ : ವಾಟಾಳ್ ನಾಗರಾಜ್ ಆಕ್ರೋಶ
ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಾಲರ್ಸ್ ಕಾಲನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್ ನಡೆಯುತ್ತಿದೆ. ನಾವು ಕಾವೇರಿಗಾಗಿ ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.
ಇದನ್ನೂ ಓದಿ:
ಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.
ಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕರ್ನಾಟಕ ತಮಿಳು ನಾಡಿಗೆ ಕದ್ದು ನೀರು ಬಿಡುತ್ತಿದೆ ಎಂದು ಸಾಂಕೇತಿಸಲು ಈ ಕಪ್ಪು ಬಣ್ಣ ಧರಿಸಿದ್ದೇನೆ, ಇನ್ನು ಬುರ್ಖಾ ಮಹಿಳೆಯರ ನ್ಯಾಯದ,ಸಮಾನತೆಯ ಸಂಕೇತವಾಗಿದೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

