ಬೆಂಗಳೂರಿನ ISRO ಕೇಂದ್ರಕ್ಕೆ ಸಿಎಂ ಭೇಟಿ: ಚಂದ್ರಯಾನ-3 ಯಶಸ್ವಿಗೆ ಕಾರಣರಾದ ವಿಜ್ಞಾನಿಗಳಿಗೆ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದ ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರಿನ ISRO ಕೇಂದ್ರಕ್ಕೆ ಸಿಎಂ ಭೇಟಿ: ಚಂದ್ರಯಾನ-3 ಯಶಸ್ವಿಗೆ ಕಾರಣರಾದ  ವಿಜ್ಞಾನಿಗಳಿಗೆ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ಚಂದ್ರಯಾನ-3  ಸಕ್ಸಸ್‌ ಆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ  ವಿಜ್ಞಾನಿಗಳ ತಂಡವನ್ನು ಅಭಿನಂದಿಸಿದರು.

ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು. ಇಸ್ರೋ ವಿಜ್ಞಾನಿಗಳಿಗೆ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಸ್ರೋ ಅಧ್ಯಕ್ಷರು ಹಾಗೂ ವಿಜ್ಞಾನಿಗಳನ್ನು ಸರ್ಕಾರದ ವತಿಯಿಂದ ಗೌರವಿಸಲಾಗುತ್ತದೆ. ಸರ್ಕಾರದ ವತಿಯಿಂದ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ – ಐದು ವರ್ಷದ ಬಾಲಕಿ ಸಾವು – Vishwanews24

ನಮಗೆಲ್ಲ ಹೆಮ್ಮೆ ತರುವಂತಹ ವಿಚಾರ ಇದು. ನಾನು ಕೂಡ ನಿನ್ನೆ ವಿಕ್ರಮ್‌ ಲ್ಯಾಂಡರ್‌ ಲ್ಯಾಂಡಿಂಗ್ ವೀಕ್ಷಣೆ ಮಾಡಿದ್ದೇನೆ. ಖುಷಿ ಆಯ್ತು, ಬಹಳ ಹೆಮ್ಮೆ ಎನಿಸಿತು. ಇದೊಂದು ದೊಡ್ಡ ಸಾಧನೆ. ಹಲವು ವರ್ಷಗಳಿಂದ ವಿಜ್ಞಾನಿಗಳು ಶ್ರಮ ಪಟ್ಟಿದ್ದಾರೆ. ನೂರಾರು ವಿಜ್ಞಾನಿಗಳ ಪರಿಶ್ರಮದ ಫಲ ಇದು ಎಂದು ಶ್ಲಾಘಿಸಿದರು.

Karnataka Breaking Kannada News Live: ಸಿಹಿ ವಿತರಿಸಿ, ಸನ್ಮಾನಿಸಿ ಇಸ್ರೋ ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಇಸ್ರೋ ತಂಡವನ್ನು ಸನ್ಮಾನಿಸಲು ನಾವು ವಿಶೇಷ ಸಮಾರಂಭ ಮಾಡುತ್ತೇವೆ. ನಾವೆಲ್ಲ ಹೆಮ್ಮೆ ಪಡುವ ಸಾಧನೆ ಇದು. ಬಹಳ ಖುಷಿ ಕೊಡುವ ವಿಚಾರ. ವೈಯಕ್ತಿಕವಾಗಿ ನನಗೆ ಬಹಳ ಸಂತೋಷ ತಂದಿದೆ. ಇದು ಬಹಳ ದೊಡ್ಡ ಸಾಧನೆ. ಈ ಸಾಧನೆಯಲ್ಲಿ ಕರ್ನಾಟಕದ ವಿಜ್ಞಾನಿಗಳೂ ಸೇರಿದ್ದಾರೆ. ಭಾರತದಾದ್ಯಂತ ಸಾವಿರ ವಿಜ್ಞಾನಿಗಳು ಈ ಸಾಧನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದರು.

ಬೆಳ್ತಂಗಡಿ : ಚಂದ್ರನ ಅಂಗಳಕ್ಕೆ ವಿಕ್ರಮ – ವಿಜ್ಞಾನಿಗಳಿಗೆ ಅಭಿನಂದಿಸಿ ಸಂತಸ ಹಂಚಿಕೊಂಡ ಡಾ. ಡಿ. ವೀರೇಂದ್ರ ಹೆಗ್ಗಡೆ  – Vishwanews24

Leave a Reply