ಬೆಂಗಳೂರಿನ ನೂತನ ಮೇಯರ್ ಆಗಿ ಬಿಜೆಪಿಯ ಗೌತಮ್ ಕುಮಾರ್ ಜೈನ್ ಆಯ್ಕೆ -Vishwanews24
ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಎಂ. ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ.
ಗೌತಮ್ ಕುಮಾರ್ ಪರವಾಗಿ 129 ಮತಗಳು ಬಿದ್ದರೆ, ವಿರುದ್ಧವಾಗಿ 110 ಮತಗಳು ಚಲಾವಣೆಗೊಂಡವು. ಕಾಂಗ್ರೆಸ್ ಅಭ್ಯರ್ಥಿ ಸತ್ಯನಾರಾಯಣ ಪರವಾಗಿ 112 ಮತ ಪಡೆದು ಸೋಲನುಭವಿಸಿದರು. ಈ ಮೂಲಕ ಗೌತಮ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 53 ನೇ ಮೇಯರ್ ಆಗಿ ಆಯ್ಕೆಯಾದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದ್ದರೂ ಕೊನೆ ಕ್ಷಣದಲ್ಲಿ ಪಕ್ಷೇತರ ಪಾಲಿಕೆ ಸದಸ್ಯರ ಜೊತೆಗಿನ ಮಾತುಕತೆ ಯಶಸ್ವಿಯಾಗದ ಪರಿಣಾಮ ಮೇಯರ್ ಹುದ್ದೆ ಕೈ ತಪ್ಪಿತ್ತು. ಆದರೆ ಈ ಬಾರಿ ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ ಪರಿಣಾಮ ಬಿಜೆಪಿ ಬಿಬಿಎಂಪಿ ಅಧಿಕಾರವನ್ನು ಹಿಡಿದಿದೆ.
