ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ,ಸಿಎಂ ಯಡಿಯೂರಪ್ಪ ಸ್ವಾಗತ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ,ಸಿಎಂ ಯಡಿಯೂರಪ್ಪ ಸ್ವಾಗತ -Vishwanews24

ಬೆಂಗಳೂರು : ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಇಂದು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ರಾಜ್ಯಕ್ಕೆ ಆಗಮಿಸಿದ ಶಾ ಅವರನ್ನು ಸಿಎಂ ಯಡಿಯೂರಪ್ಪ ಅವರು ಗುಲಾಬಿ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದ ಗೌಡ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಿ.ಕೆ. ಅರುಣಾ, ಸಚಿವರಾದ ಸುರೇಶ್ ಕುಮಾರ್, ವಿ. ಸೋಮಣ್ಣ, ಅರವಿಂದ ಲಿಂಬಾವಳಿ, ಎಸ್.ಟಿ. ಸೋಮಶೇಖರ್, ಅರ್. ಅಶೋಕ್, ಭೈರತಿ ಬಸವರಾಜ, ಕೆ. ಗೋಪಾಲಯ್ಯ, ಸಂಸದ ಪಿ.ಸಿ. ಮೋಹನ್, ಕೆ.ಸಿ. ರಾಮಮೂರ್ತಿ, ರಾಜೀವ್ ಚಂದ್ರಶೇಖರ್, ಡಿಜಿಪಿ ಪ್ರವೀಣ್ ಸೂದ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಗೃಹ ಇಲಾಖೆ ಎಸಿಎಸ್ ರಜನೀಶ್ ಗೋಯೆಲ್ ಕೂಡ ಉಪಸ್ಥಿತರಿದ್ದರು.

 

http://ಮಂಗಳೂರು : ಜಿಲ್ಲೆಯಲ್ಲಿ 6 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ -Vishwanews24