ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ.

ಬೆಂಗಳೂರಿನ ಕಗ್ಗದಾಸಪುರದಲ್ಲಿ ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ದೃಢಪಡಿಸಿದೆ. ಶುಕ್ರವಾರವಷ್ಟೇ ಡೆಂಗ್ಯೂ ಜ್ವರಕ್ಕೆ ಇಬ್ಬರು ಮೃತಪಟ್ಟಿದ್ದು, ಇದೀಗ ಮತ್ತೆ ಡೆಂಗ್ಯೂಗೆ ಯುವಕ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಕಾರ್ಕಳ: ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಲ್ಲ :  ಶುಭದರಾವ್ ವ್ಯಂಗ್ಯ – vishwanews24

ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್​ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್‌ ದರ 30 ರೂ. ಇಳಿಕೆ – vishwanews24

Leave a Reply