ಬೆಂಗಳೂರು : 17 ವರ್ಷದ ಯುವಕನ ಬರ್ಬರ ಹತ್ಯೆ – vishwanews24
ಬೆಂಗಳೂರು : 17 ವರ್ಷದ ಯುವಕನ ಬರ್ಬರ ಹತ್ಯೆ
ಬೆಂಗಳೂರು: 17 ವರ್ಷದ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ವೈಮ್ಯಾಕ್ಸ್ ಸರ್ಕಲ್ ಬಳಿ ಘಟನೆ ನಡೆದಿದೆ. ಮಂಜುನಾಥ್ ಕೊಲೆಯಾದ ತಡರಾತ್ರಿ ವೈಮ್ಯಾಕ್ಸ್ ವೃತ್ತದ ಬಳಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಗಂಗಮ್ಮ ಗುಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಭೀಕರ ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
