ಬೆಂಗಳೂರು : ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ.

ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್‌ ಉತ್ತರ ಪ್ರದೇಶ  ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ಉಡುಪಿ: ಇನ್‌ಸ್ಟಾಗ್ರಾಂನಲ್ಲಿ ಹೂಡಿಕೆ ಹಣಕ್ಕೆ ಕಮಿಷನ್ ನೀಡುವುದಾಗಿ ನಂಬಿಸಿ ಮಹಿಳೆಗೆ 12.46 ಲಕ್ಷ ರೂ. ವಂಚನೆ – vishwanews24

ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿದ್ದಾರೆ.

ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವಿಧಿ ವಿಜ್ಞಾನ ಪ್ರಾಯೋಗಾಲಯದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಯಾಕೆ ಆತ್ಮಹತ್ಯೆಗೆ ಶರಣಾದರು ಎನ್ನುವುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದರು.

ಶಿರ್ವ: ಒಣಗಲು ಹಾಕಿದ್ದ ಸಾವಿರಾರು ರೂ. ಮೌಲ್ಯದ ಅಡಿಕೆ ಕಳವು – vishwanews24

Leave a Reply