ಬೆಂಗಳೂರು:  ಕಟ್ಟಡ ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ,ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ :ಸಿಎಂ ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:  ಕಟ್ಟಡ ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ , ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ :ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ತರ ಅಕ್ರಮ ಕಟ್ಟಡಗಳನ್ನು ಕಟ್ಟಿ ಅನಾಹುತ ಸಂಭವಿಸಿದರೆ ಸತ್ತವರಿಗೆ ಹೊಣೆ ಯಾರು? ಅವ್ನು ಎಲ್ಲಿ ಕಮಿಷನರ್ ಎಂದು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ಇನ್ಮುಂದೆ ಯಾವುದೇ ಅಕ್ರಮ ಕಟ್ಟಡ ಕಟ್ಟುವಂತಿಲ್ಲ ಎಂದು ತಾಕೀತು ಮಾಡಿದರು.

ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬದವರಿಗೆ ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂಪಾಯಿ, ಬಿಬಿಎಂಪಿಯಿಂದ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. 6 ಮಂದಿ ಗಾಯಗೊಂಡಿದ್ದು, ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ – vishwanews24

ಪರಿಹಾರ ನೀಡಿರುವುದು ಅವರ ಜೀವಕ್ಕೆ ಸಮವಲ್ಲ. ಜೀವಕ್ಕೆ ಬೆಲೆ ಕಟ್ಟಲಾಗದು. ಆದರೂ ಮೃತರೆಲ್ಲ ಕೂಲಿ ಕಾರ್ಮಿಕರು. ಅವರನ್ನು ನಂಬಿಕೊಂಡವರಿಗೆ ನೆರವು ನೀಡಬೇಕಿದೆ. ಮೃತದೇಹವನ್ನು ಅವರ ಊರಿಗೆ ಕೊಂಡೊಯ್ಯಲೂ ವ್ಯವಸ್ಥೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

Leave a Reply