ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್ಐಟಿ ದಾಳಿ – vishwanews24
ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್
ಬೆಂಗಳೂರು: ನಕಲಿ ಔಷಧಿ ದಂಧೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಆರೋಪಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಔಷಧಿಗಳನ್ನು ಖರೀದಿಸಿ ಮಾರಾಟ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಮೂರು ಫಾರ್ಮಾಗಳ ಮೇಲೆ ದಾಳಿ ನಡೆಸಿದ್ದಾರೆ.
ನಕಲಿ ಔಷಧಿ ದಂಧೆಕೋರರ ವಿಚಾರಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಹಲವು ಮಹತ್ವದ ಮಾಹಿತಿಗಳು ಹೊರಬಂದಿವೆ ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಶಾಂತ್ ಹಾಗೂ ಡಿಸ್ಟ್ರಿಬ್ಯೂಟರ್ ಆಗಿದ್ದ ವಿರೇಶ್ ಅವರಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಔಷಧಿಗಳನ್ನು ಪಡೆದು ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ ನಕಲಿ ಔಷಧಿಗಳನ್ನು ಸೀಜ್ ಮಾಡಿದ್ದಾರೆ.
ಇದನ್ನೂ ಓದಿ:
ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24
ಕಳೆದ ವರ್ಷ ಏಪ್ರಿಲ್ನಿಂದ ಇಲ್ಲಿಯವರೆಗೆ ಆರೋಪಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಔಷಧಿಗಳನ್ನು ಖರೀದಿಸಿ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಆರ್ಆರ್ ಫಾರ್ಮಾ, ಚಾಮರಾಜಪೇಟೆಯಲ್ಲಿರುವ ಮೆಡಿ365 ಎಲ್ಎಲ್ಪಿ ಫಾರ್ಮಾ ಹಾಗೂ ತಲಘಟ್ಟಪುರದಲ್ಲಿರುವ ಪಾಟೇಲ್ ಫಾರ್ಮಾ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಫಾರ್ಮಾಗಳ ಮಾಲೀಕರಿಗೆ ನೋಟಿಸ್ ನೀಡಿ ವಿಚಾರಣೆ ಕೂಡ ನಡೆಸಿದ್ದಾರೆ. ಆರೋಪಿಗಳಿಂದ ಯಾವಾಗಿನಿಂದ ನಕಲಿ ಮಾತ್ರೆಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿತ್ತು ಹಾಗೂ ಯಾವೆಲ್ಲಾ ಆಸ್ಪತ್ರೆಗಳಿಗೆ ಫಾರ್ಮಾಗಳ ಮೂಲಕ ನಕಲಿ ಮಾತ್ರೆಗಳನ್ನು ಸರಬರಾಜು ಮಾಡಲಾಗಿದೆ ಎಂಬ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳು ಫಾರ್ಮಾ ಮಾಲೀಕರಿಂದ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
