ಬೆಂಗಳೂರು: ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ ವಜಾ – Vishwanews24
ಬೆಂಗಳೂರು: ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ ವಜಾ
ಬೆಂಗಳೂರು: ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.
ಹಾಕಿಕೊಂಡಿರುವ ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ ಪ್ರವೇಶಿಸಲು ಅವಕಾಶ ನೀಡದೆ ಅಪಮಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಜಾಲತಾಣದಲ್ಲಿ ಭಾರಿ ಆಕ್ರೋ ವ್ಯಕ್ತವಾಗಿತ್ತು.
ಕುಂದಾಪುರ : ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಮೃತ್ಯು – Vishwanews24
ನಮ್ಮ ಮೆಟ್ರೋ ಸಿಬ್ಬಂದಿ ಮಾನವೀಯತೆಯನ್ನೇ ಮರೆತು ದೇಶದ ಬೆನ್ನೆಲುಬಾಗಿರುವ ರೈತನಿಗೆ ಅಪಮಾನ ಮಾಡಿದ್ದಾರೆ ಎಂಬ ಆಕ್ರೋಶ ಈಗ ಭುಗಿಲೆದ್ದಿದೆ. ಬೆಂಗಳೂರಿನ ರಾಜಾಜಿ ನಗರದ ಮೆಟ್ರೋ ಸ್ಟೇಷನ್‌ನಲ್ಲಿ ಮೆಟ್ರೋ ಸಿಬ್ಬಂದಿ ನಡೆಸಿರುವ ಈ ಅತಿರೇಕದ ವರ್ತನೆ ಸಹಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.
ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ , ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ.
— ನಮ್ಮ ಮೆಟ್ರೋ (@OfficialBMRCL) February 26, 2024
ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ್ದಾರೆ. ಈ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುಡ್ಡಿನ ದರ್ಪದಿಂದ, ಅಹಂಕಾರದಿಂದ ಗೋಬ್ಯಾಕ್ ಅಭಿಯಾನ ಮಾಡಿಸಿದ್ದಾರೆ : ಶೋಭಾ ಕರಂದ್ಲಾಜೆ – Vishwanews24
