ಮಂಗಳೂರು – ಬೆಂಗಳೂರು ರಾತ್ರಿ ರೈಲು ಸಂಚಾರ ಸೇವೆ ಇಂದಿನಿಂದ ಆರಂಭ

Featured, ದಕ್ಷಿಣ ಕನ್ನಡ

ಮಂಗಳೂರು: ಭೂಕುಸಿತದಿಂದ ರದ್ದಾಗಿದ್ದ ಬೆಂಗಳೂರು-ಮಂಗಳೂರು ಮಧ್ಯೆ ರಾತ್ರಿ ಸಂಚರಿಸುವ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ.

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಸುಬ್ರಹ್ಮಣ್ಯ ಮತ್ತು ಎಡಕುಮೇರಿ ನಡುವೆ ಸುಮಾರ 55 ಕಿ.ಮೀ ಉದ್ದದ ರೈಲ್ವೆ ಹಳಿಯ ಮೇಲೆ 65 ಕ್ಕೂ ಹೆಚ್ಚು ಕಡೆಗಳಲ್ಲಿ ಭುಕುಸಿತವಾದ ಕಾರಣ ಈ ಮಾರ್ಗದಲ್ಲಿ ರೈಲು ಸಂಚಾರ ನಿಷೇಧಿಸಲಾಗಿತ್ತು.

ಇದೀಗ ರಿಪೇರಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಾಯೋಗಿಕ ಓಡಾಟದ ನಂತರ ಕೆಲವು ದಿನಗಳ ಹಿಂದೆ ಈ ಮಾರ್ಗದಲ್ಲಿ ಗೂಡ್ಸ್ ರೈಲು ಸಂಚಾರ ಆರಂಭಿಸಲಾಗಿತ್ತು. ಗೂಡ್ಸ್ ರೈಲು ಸಂಚಾರ ಯಶಸ್ವಿಯಾಗಿ ಮುಂದುವರಿಯುತ್ತಿರುವುದು ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸದ ಹಿನ್ನಲೆಯಲ್ಲಿ ಈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಓಡಾಟಕ್ಕೆ ಅವಕಾಶ ಒದಗಿಸಲಾಗಿದೆ ಎಂದು ತಿಳಿದುಬಂದಿದೆ..