ಬೆಂಗಳೂರು : ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ

ಬೆಂಗಳೂರು: ಇಂದು ನಗರದ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್‌ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್‌ ಪೋರ್ಟ್ ರೋಡ್ ಸೇರಿದಂತೆ 20 ಕಡೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ.

ಡಬಲ್‌ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ..

Leave a Reply