ಬೆಂಗಳೂರು : ಮದರಸಾಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ : ಶೀಘ್ರವೇ ಸರ್ಕಾರದ ಆದೇಶ – Vishwanews24

Featured, ರಾಜ್ಯ ನ್ಯೂಸ್

ಮದರಸಾಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ : ಶೀಘ್ರವೇ

ಸರ್ಕಾರದ ಆದೇಶ 

ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್‍ವಿನ್, ಸೆಂಟ್ ಜೋಸೆಫ್ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸದ್ದನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಸುತ್ತೋಲೆ ಹೊರಡಿಸಲು ಮುಂದಾಗಿದೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಖಾಸಗಿ ಶಾಲೆಗಳ ಜೊತೆಗೆ ಮದರಸಾಗಳಲ್ಲೂ ನಿತ್ಯ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರು ಶಿಕ್ಷಣ ಇಲಾಖೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಸಚಿವರು, ಮದರಸಾಗಳಲ್ಲೂ ಕಡ್ಡಾಯವಾಗಿ ನಿತ್ಯ ರಾಷ್ಟ್ರಗೀತೆ ಹಾಡಿಸಲು ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಉಡುಪಿ ಜಿಲ್ಲಾ ನೂತನ ಎಸ್ ಪಿ ಆಗಿ ಅಕ್ಷಯ್ ಮಚ್ಚೇಂದ್ರ – Vishwanews24

Leave a Reply