ಬೆಂಗಳೂರು: ಮೆಟ್ರೋ  ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ  – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮೆಟ್ರೋ  ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ 

ಬೆಂಗಳೂರು: ನಮ್ಮ ಮೆಟ್ರೋ  ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಯುವಕ ಯಾರು? ಯಾಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬುದು ತಿಳಿದು ಬಂದಿಲ್ಲ. ಮಾ.21ರ ಮಧ್ಯಾಹ್ನ 2:10ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಬಿಎಂಆರ್‌ಸಿಎಲ್‌ ಎಕ್ಸ್‌ ಮೂಲಕ ತಿಳಿಸಿದೆ.

ಮೆಟ್ರೋ ಹಳಿಗೆ ಹಾರಿದ ಕಾರಣಕ್ಕೆ 15 ನಿಮಿಷಕ್ಕೂ ಹೆಚ್ಚು ಸಮಯ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರೈಲು ಹಳಿಗೆ ಹಾರಿದ ಯುವಕನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆತ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಟ್ರೋ ಓಡಾಟವನ್ನು ಬಂದ್‌ ಮಾಡಿ ನಿಲ್ದಾಣದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಹೊರ ಕಳಿಸಿದ್ದಾರೆ.

ಉಡುಪಿ : ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಶರ್ಫುದ್ದೀನ್ ಶೇಖ್ ನೇಮಕ – Vishwanews24

ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಉಡುಪಿ : ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಶರ್ಫುದ್ದೀನ್ ಶೇಖ್ ನೇಮಕ – Vishwanews24

Leave a Reply