ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ – vishwanews24
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತೆ ಶಾಕ್ ಕೊಟ್ಟಿದ್ದಾರೆ. ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲೋದಿಲ್ಲ, ಮುಂದುವರೆಸೋದಾಗಿ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಕೊಟ್ಟಿದ್ದಾರೆ.
ಮತ್ತೊಂದು ಕಡೆ ಬೆಂಗಳೂರಿನ ಹಲವು ಕಡೆ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ವ್ಯಾಪಾರಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೊಂದು ಹೋರಾಟಕ್ಕೂ ಬೀದಿಬದಿ ವ್ಯಾಪಾರ ಸಮಿತಿ ಸಜ್ಜಾಗ್ತಿದೆ.
ಇದನ್ನೂ ಓದಿ:
ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24
ಕಳೆದ 8 ದಿನಗಳಿಂದ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಾ ಇದೆ. ಸುಮಾರು 430 ಕಿಮೀ ಫುಟ್ಪಾತ್ ತೆರವು ಆಗಿದೆ. ಫುಟ್ಪಾತ್ ತೆರವಿಗೆ ಭಾರೀ ವಿರೋಧ ವ್ಯಕ್ತವಾಗ್ತಿದೆ. ಹೀಗಾಗಿ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ ಜೊತೆ ಸಭೆ ನಡೆದಿದೆ.
ಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಕೆಲವೊಂದು ಬೇಡಿಕೆಗಳನ್ನ ಈಡೇರಿಸುವುದರ ಬಗ್ಗೆ ಚರ್ಚೆ ಆಗಿದೆ. ಆದರೆ ಯಾವುದೇ ಕಾರಣಕ್ಕೂ ಫುಟ್ಪಾತ್ ತೆರವು ಕಾರ್ಯಾಚರಣೆ ಸ್ಥಗಿತ ಆಗಲ್ಲ, ಮುಂದುವರಿಯುತ್ತದೆ ಎಂದು ಸಚಿವರು ಹೇಳಿದ್ದಾರೆ.
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24
