ಬೆಂಗಳೂರು :  ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸುವಂತೆ ಸಿಎಂ ಆದೇಶ  – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು :  ಶಾಲೆಗಳಿಗೆ ಬಾಂಬ್ ಬೆದರಿಕೆ  ಹಾಕಿದವರನ್ನು ಕೂಡಲೇ ಬಂಧಿಸುವಂತೆ ಸಿಎಂ ಆದೇಶ 

ಬೆಂಗಳೂರು,: ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ -ಮೇಲ್ ಬಂದಿರುವ ಕುರಿತು ಶುಕ್ರವಾರ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದು, ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸುವಂತೆ ಆದೇಶಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಕದುಡುವ ಹುನ್ನಾರ ನಡೆಯುತ್ತಿದ್ದು, ಪ್ರಗತಿ ಹೊಂದಿದ ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡಲಾಗುತ್ತಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಬೆದರಿಕೆ ಬಂದ ಶಾಲೆಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಇನ್ನು ಎಲ್ಲಾ ರೀತಿಯ ತನಿಖೆ ನಡೆಯುತ್ತಿದೆ. ಎಲ್ಲಿಂದ ಕರೆ ಬಂದಿದೆ ಅನ್ನುವುದರ ಬಗ್ಗೆ ತೆನಿಖೆಯಾಗುತ್ತಿದೆ.ಪೋಷಕರು ಆತಂಕ ಪಡುವ ಅಗತ್ಯವಿಲ್ಲ.ಕೆಟ್ಟ ಹೆಸರು ತರಬೇಕು ಎಂದು ಹೇಳಿ ಈ ರೀತಿ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಗಂಭೀರವಾಗಿ ತಗೆದುಕೊಂಡು ತಪಾಸಣೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಏ. 11 :  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ..Vishwanews24

Leave a Reply