ಬೆಂಗಳೂರು: ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24
ಬೆಂಗಳೂರು: ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ
ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ.
ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9), ಗೀತಾ ಮತ್ತು ಗಿರಿಜಾ 3 ವರ್ಷದ ಮಕ್ಕಳು ಗಾಯಗೊಂಡಿದ್ದಾರೆ. ರಾಯಚೂರು ಮೂಲದ ಕುಟುಂಬ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದೆ. ಕರಿಲಿಂಗಪ್ಪ ಕೂಲಿ ಕೆಲಸ ಮಾಡಿಕೊಂಡಿದ್ದಾರೆ.
ಬೆಳಗ್ಗೆ 6 ಗಂಟೆಗೆ ಸಿಲಿಂಡರ್ ಸ್ಫೋಟವಾಗಿದ್ದು, ಮಕ್ಕಳು ಹಾಗೂ ದಂಪತಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಲಕ್ಷ್ಮಮ್ಮ ಮತ್ತು ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ
