ಬೆಂಗಳೂರು:ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲ ಪತ್ತೆ ; ನಾಲ್ವರ ಬಂಧನ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ  ಮಾರಾಟ ಬೃಹತ್ ಜಾಲ ಪತ್ತೆ ; ನಾಲ್ವರ ಬಂಧನ

ಬೆಂಗಳೂರಿನಿಂದ ತಮಿಳುನಾಡಿಗೆ ನಂದಿನಿ ತುಪ್ಪ ಪೂರೈಕೆ , ಕರ್ನಾಟಕದಲ್ಲಿ ಮಾರಾಟ

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ  ಮಾರಾಟ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು  ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ ಮಾಡಿದ್ದು, ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಮಹೇಂದ್ರ, ದೀಪಕ್, ಮುನಿರಾಜು, ಅಭಿ ಅರಸು ಬಂಧಿತರು. ಒಟ್ಟು 1.26 ಕೋಟಿ ರೂ. ಮೌಲ್ಯದ ವಸ್ತುವನ್ನು ಬಂಧಿತರಿಂದ ಜಪ್ತಿ ಮಾಡಲಾಗಿದೆ.

ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ಮಾಡುತ್ತಿದ್ದರು. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ ಒರಿಜಿನಲ್ ತುಪ್ಪ ಖರೀದಿಸುತ್ತಿದ್ದರು. ಇಲ್ಲಿ ಖರೀದಿಸಿದ ಒರಿಜಿನಲ್ ತುಪ್ಪ ತಮಿಳುನಾಡಿಗೆ ಕಳುಹಿಸುತ್ತಿದ್ದರು. ಅದನ್ನ ತಮಿಳುನಾಡಿನಲ್ಲಿ ಕಲಬೆರಕೆ ಮಾಡುತ್ತಿದ್ದರು. ಒಂದು ಲೀಟರ್ ತುಪ್ಪಕ್ಕೆ 4 ಲೀಟರ್ ನಕಲಿ ತುಪ್ಪ ಬೆರೆಸುತ್ತಿದ್ದರು. ಫಾರ್ಮ್ ಆಯಿಲ್, ತೆಂಗಿನ ಎಣ್ಣೆ ಮತ್ತು ಡಾಲ್ಡಾ ಬೆರೆಸುತ್ತಿದ್ದರು. ಅದನ್ನ ಮತ್ತೆ ಕರ್ನಾಟಕಕ್ಕೆ ತಂದು ಮಾರಾಟ ಮಾಡುತ್ತಿದ್ದರು.

ಉಡುಪಿ: ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ; ಕಾವಡಿ ಶಾಖೆ ವ್ಯವಸ್ಥಾಪಕ ಹಾಗೂ ಸಿಬ್ಬಂದ ವಿರುದ್ಧ ಪ್ರಕರಣ ದಾಖಲು – vishwanews24

ನಿನ್ನೆ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿರುವ ಕೃಷ್ಣ ಎಂಟರ್​ಪ್ರೈಸಸ್ ಮಾಲೀಕರಿಗೆ ಸೇರಿದ ಗೋಡೌನ್ ಹಾಗೂ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಒಟ್ಟು 8,136 ಲೀಟರ್ ಕಲಬೆರಕೆ ತುಪ್ಪ, 4 ವಾಹನ, ತೆಂಗು ಹಾಗೂ ಫಾಮ್​​​ ಆಯಿಲ್, ನಕಲಿ ತುಪ್ಪ ತಯಾರು ಮಾಡುವ ಯಂತ್ರಗಳು ಸೇರಿ 1 ಕೋಟಿ 26 ಲಕ್ಷದ 95 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Leave a Reply