ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ; ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ – vishwanews24
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಬಿಜೆಪಿಗೆ
ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ
ಉಪಮೇಯರ್ ಆಗಿ ವೀಣಾ ಜೋಶಿ ಆಯ್ಕೆ
ಬೆಳಗಾವಿ: ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ಗೆ ಚುನಾವಣೆ ನಡೆದಿತ್ತು. ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಂತ್ರ ಪ್ರತಿತಂತ್ರ ರೂಪಿಸಿದ್ದವು. ಹೀಗಾಗಿ ತೀವ್ರ ಕುತೂಹಲ ಮೂಡಿಸಿತ್ತು. ಸದ್ಯ ಈ ಕುತೂಹಲಕ್ಕೆ ಬ್ರೇಕ್ ಬಿದ್ದಿದ್ದು, ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ ಸೇರಿದೆ. ಆ ಮೂಲಕ ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ ಆಗಿದ್ದು, ಉಪಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಆಯ್ಕೆ ಆಗಿದ್ದಾರೆ.
3ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಕೈ ಎತ್ತುವ ಮೂಲಕ ಆಯ್ಕೆಗೆ ಚುನಾವಣಾಧಿಕಾರಿ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ವಿರುದ್ಧವಾಗಿ 5 ಮತ ಚಲಾವಣೆ ಆಗಿದ್ದರೆ, ವೀಣಾ ಪರವಾಗಿ 40 ಹಾಗೂ ವಿರುದ್ಧವಾಗಿ 19 ಮತಗಳು ಚಲಾವಣೆ ಮಾಡಲಾಗಿದೆ.
ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಸಹಕಾರಿಯಾಗಲಿದೆ :ಯು.ಟಿ.ಖಾದರ್ – vishwanews24
