ಬೆಳಗಾವಿ ಲೋಕಸಭಾ ಉಪಚುನಾವಣೆ: ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ -Vishwanews24

Featured, ರಾಷ್ಟ್ರ ನ್ಯೂಸ್

ಬೆಳಗಾವಿ ಲೋಕಸಭಾ ಉಪಚುನಾವಣೆ: ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ -Vishwanews24

ನವದೆಹಲಿ: ಬೆಳಗಾವಿ ಉಪಚುನಾವಣೆಯಲ್ಲಿ ದಿ. ಸುರೇಶ್‌ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಬಿಜೆಪಿ  ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಂಗಳಾ ಸುರೇಶ್‌ ಅಂಗಡಿ, ಬಸವಕಲ್ಯಾಣಕ್ಕೆ ಶರಣು ಸಲಗಾರ್‌, ಮಸ್ಕಿಗೆ ಪ್ರತಾಪ್‌ ಗೌಡ ಪಾಟೀಲ್‌ ಅವರಿಗೆ ಟಿಕೆಟ್‌ ನೀಡಿದೆ.

ದಿವಂಗತ ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಅವರಿಗೆ ಟಿಕೆಟ್ ಸಿಗಬಹುದು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್‌ ಅಚ್ಚರಿ ನಡೆ ಅನುಸರಿಸಿದ್ದು ಸುರೇಶ್‌ ಅಂಗಡಿ ಪತ್ನಿಗೆ ಟಿಕೆಟ್‌ ನೀಡಿದೆ.

ಇದನ್ನೂ ಓದಿ : ಉಡುಪಿ :ಜಿಲ್ಲೆಯಲ್ಲಿ 10117.28 ಕೋಟಿ ಸಾಲ ನೀಡಿಕೆ ಗುರಿ : ಡಾ. ನವೀನ್ ಭಟ್ -Vishwanews24

ಬಸವಕಲ್ಯಾಣಕ್ಕೆ ಶರಣು ಸಲಗಾರ್ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದರು. ಕಳೆದ ಬಾರಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ನಿರಾಕರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಏ.17 ರಂದು ಉಪಚುನಾವಣೆ ನಡೆಯಲಿದೆ.