ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಜೈಲು, 50 ಸಾವಿರ ರೂ. ದಂಡ – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಜೈಲು, 50 ಸಾವಿರ ರೂ. ದಂಡ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಸಜೆ ಹಾಗೂ ರೂ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಶಿಕ್ಷೆಗೆ ಒಳಗಾಗಿರುವ ಆರೋಪಿ ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ (48) ಎಂದು ಗುರುತಿಸಲಾಗಿದೆ.

ಆರೋಪಿ 2021 ರ ಡಿಸೆಂಬರ್ ನಿಂದ 2022 ರ ಫೆಬ್ರವರಿಯ ವರೆಗೆ ತನ್ನ ಪರಿಚಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದನೆನ್ನಲಾಗಿದೆ. ಈ ಬಾಲಕಿ 2022ರ ಮಾರ್ಚ್ ಮೂರರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ: ಕಾಪು ತಾಲೂಕಿನ ನೂತನ ಅಧ್ಯಕ್ಷರಾಗಿ ನಸೀರ್ ಅಹಮದ್ ಆಯ್ಕೆ – Vishwanews24

ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಬಾಬಿ ವಿರುದ್ದ ಆರೋಪ ಸಾಬೀತಾಗಿದ್ದು ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಕಾರಾಗೃಹ ಮತ್ತು ರೂ 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ: ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್ ಫಿಶ್’ – Vishwanews24

Leave a Reply