ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.
ಇದನ್ನೂ ಓದಿ:
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24
ಇವರಿಬ್ಬರು ಇಂದು ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? – vishwanews24
