ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್- ವಿದ್ಯಾರ್ಥಿ ಸಾವು..vishwanews24
ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್- ವಿದ್ಯಾರ್ಥಿ ಸಾವು..
ಬೆಳ್ತಂಗಡಿ: ಬೈಕ್ ಒಂದು ಡಿವೈಡರಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23ರಂದು ನಡೆದಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಉಜಿರೆಯ ಖಾಸಗಿ ಕಾಲೇಜಿನ ಮೆಕ್ಯಾನಿಕಲ್ ಡಿಪ್ಲೊಮಾ ವಿದ್ಯಾರ್ಥಿ ದೀಕ್ಷಿತ್ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಕಾಲೇಜಿನಲ್ಲಿ ಸ್ಪೋರ್ಟ್ಸ್ ಡೇ ಕಾರ್ಯಕ್ರಮ ಇದ್ದ ಕಾರಣ ದೀಕ್ಷಿತ್ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವ ವೇಳೆ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಕಾರಣ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಬೈಕ್ ಮಗುಚಿದ್ದು, ದೀಕ್ಷಿತ್ ತಲೆಗೆ ಗಂಭೀರ ಗಾಯಗಳಾಗಿದ್ದವು. ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ದೀಕ್ಷಿತ್ ಸಾವನ್ನಪ್ಪಿದ್ದಾರೆ.
ಉಡುಪಿ ನಗರದ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಎಸ್ಪಿ ಡಾ.ಅರುಣ್ – vishwanews24
