ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ – ಪಾದಚಾರಿ ಮೃತ್ಯು; ಸವಾರೆ ಗಂಭೀರ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ – ಪಾದಚಾರಿ ಮೃತ್ಯು; ಸವಾರೆ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಶೇಖರ್ ಹೇರಾಜೆ ಅವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಗುರುವಾರ ರಾತ್ರಿ ನಡೆದಿದೆ.

ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಶೇಖರ್ ಬಂಗೇರ ಹೇರಾಜೆ(65) ಮೃತ ದುರ್ದೈವಿ.

ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ , ಪರಿಷ್ಕೃತ ಶುಲ್ಕ ಜಾರಿಗೆ – vishwanews24

ಶೇಖರ್ ಬಂಗೇರ ಹೇರಾಜೆ ಅವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಅವರಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ (19) ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಡುಪಿ : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆಯವರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ – vishwanews24

Leave a Reply