ಬೆಳ್ತಂಗಡಿ : ಪತ್ನಿಯನ್ನು ಬಿಟ್ಟು ನಾದಿನಿ ಜತೆ ಜೊತೆ ಪರಾರಿಯಾದ ಗಂಡ..!

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಪತ್ನಿಯನ್ನು ಬಿಟ್ಟು ನಾದಿನಿ ಜತೆ ಜೊತೆ ಪರಾರಿಯಾದ ಗಂಡ..!

 ಬೆಳ್ತಂಗಡಿ : ಹೆಂಡತಿಯನ್ನು ತವರಿನಲ್ಲಿ ಬಿಟ್ಟು ನಾದಿನಿಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ಕೈಕಂಬ ಎಂಬಲ್ಲಿ ನಡೆದಿದೆ.

ಮಹಮ್ಮದ್‌ ಅವರ ಪುತ್ರಿ ಸೌಧಾ ಎಂಬಾಕೆಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಮಗಳು ಹಾಗೂ ಅಳಿಯ ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ನಾದಿನಿ ರೈಹಾನಾಳ ಜೊತೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ, ಫೋನ್ ಮುಖಾಂತರ ಸಂಭಾಷಣೆ ನಡೆಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಹಿರಿಯ ಮಗಳು ಹಾಗೂ ಅಳಿಯನಿಗೆ ಮನಸ್ತಾಪ ಉಂಟಾಗಿ, ಪತ್ನಿ ಸೌಧಾ ತನ್ನ ತವರು ಮನೆಯಲ್ಲಿದ್ದರು. ಜುಲೈ 8ರಂದು ಬೆಳಗ್ಗೆ ಮುಸ್ತಾಫಾ ಹಾಗೂ ಅವರ ತಾಯಿ ಕಾರಿನಲ್ಲಿ ಕನ್ಯಾಡಿಯ ಕೈಕಂಬದಲ್ಲಿರುವ ಮಾವನ ಮನೆಗೆ ಬಂದಿದ್ದರು. ಈ ವೇಳೆ ರೈಹಾನಾ ಮನೆಯಲ್ಲಿ ಯಾರಿಗೂ ಹೇಳದೇ ಬ್ಯಾಗೊಂದನ್ನು ಹಿಡಿದುಕೊಂಡು ಆ ಕಾರಿನಲ್ಲಿ ಹೋಗಿದ್ದಾಳೆ.

ತನ್ನ ಕಿರಿಯ ಪುತ್ರಿ ಈವರೆಗೆ ಮನೆಗೆ ವಾಪಾಸ್ಸಾಗದೇ ಕಾಣೆಯಾಗಿದ್ದಾಳೆ ಎಂದು ತಂದೆ ಮಹಮ್ಮದ್‌‌ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.