ಬೆಳ್ತಂಗಡಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಅಪರಾಧಿ ಮದ್ರಸಾ ಶಿಕ್ಷಕನಿಗೆ 6 ತಿಂಗಳು ಜೈಲು – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಅಪರಾಧಿ ಮದ್ರಸಾ ಶಿಕ್ಷಕನಿಗೆ 6 ತಿಂಗಳು ಜೈಲು

ಬೆಳ್ತಂಗಡಿ :ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಮದ್ರಸಾ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಆರೋಪಿ ಮೂಡಿಗೆರೆ ತಾಲೂಕಿನ ಬಣ್ಣ ಮೂಲದ ಮದ್ರಸಾ ಶಾಲೆಯ ಶಿಕ್ಷಕ ಮುಹಮ್ಮದ್‌ ಸೈಫುಲ್ಲಾನ ಎಂದು ಗುರುತಿಸಲಾಗಿದೆ.

ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಹೋಗುತ್ತಿದ್ದ ವೇಳೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಆರೋಪಿ ಮುಹಮ್ಮದ್‌ ಸೈಫುಲ್ಲಾನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸುರತ್ಕಲ್:‌ ಫಾಝಿಲ್‌ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳಿಗೆ ಜಾಮೀನು – Vishwanews24

ಇದೀಗ ತನಿಖೆ ಬಳಿಕ ಆರೋಪಿ ವಿರುದ್ಧ ಪೊಲೀಸರು ಬೆಳ್ತಂಗಡಿ ಹಿರಿಯ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಎಚ್‌.ಎಂ. ಅವರು ಆರೋಪಿ ಮುಹಮ್ಮದ್‌ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿ ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದ್ದಾರೆ.

ಮಂಗಳೂರು : ನಾಗರಾಧನೆಗೆ ಸ್ವಂತ ಜಮೀನು ದಾನ ಮಾಡಿದ ಸ್ಪೀಕರ್ ಯು.ಟಿ ಖಾದರ್ – Vishwanews24

Leave a Reply