ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು

ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಕಾಂಕ್ರೀಟ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗ ಸಂಪೂರ್ಣ ಜಖಂಗೊಂಡಿದೆ.

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ಅಪಘಾತದಿಂದ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದು, ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿರುವುದಾಗಿ ತಿಳಿದು ಬಂದಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply