ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಯುವತಿ ಸಾವು – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಯುವತಿ ಸಾವು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿ. ಯುವತಿ ಕಲ್ಲಡ್ಕದ ಮೆಡಿಕಲೊಂದರಲ್ಲಿ ಕೆಲಸ ಮಾಡುತ್ತಿದ್ದಳು.

ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ಮನೆ ಸಮೀಪದ ರಸ್ತೆಗೆ ಬಂದಿದ್ದಾಳೆ. ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್‌ ಪ್ರವಹಿಸಿದೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಯುವತಿ ಮೃತಪಟ್ಟಿದ್ದಾಳೆ.

ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1ರಲ್ಲಿ ಮೇಲ್ಚಾವಣಿ ಕುಸಿತ; ಓರ್ವ ಸಾವು, 6 ಮಂದಿಗೆ ಗಾಯ – vishwanews24

ಮೆಸ್ಕಾಂ ಇಲಾಖೆ ನಿರ್ಲಕ್ಷ್ಯವೇ ಯುವತಿ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯವರು ಕಳೆದ ಕೆಲವು ಸಮಯಗಳಿಂದ ಅಪಾಯಕಾರಿ ವಿದ್ಯುತ್ ತಂತಿ ಹಾಗೂ ಕಂಬ ತೆರವುಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ನೀಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇಂತಹ ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.

ಆದ್ದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಮನೆಯವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದಾರೆ. ಮೆಸ್ಕಾಂ ಇಲಾಖೆಯಿಂದ ಈಗಾಗಲೇ ರೂ 5 ಲಕ್ಷ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರೂ. 25 ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಸೆ. 15ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

Leave a Reply