ಬೈಕಿಗೆ ಟ್ರಕ್ ಡಿಕ್ಕಿ : ಕಿರುತೆರೆ ನಟ ಅಮನ್ ಜೈಸ್ವಾಲ್ ಮೃತ್ಯು – vishwanews24

Featured, ರಾಷ್ಟ್ರ ನ್ಯೂಸ್

ಬೈಕಿಗೆ ಟ್ರಕ್ ಡಿಕ್ಕಿ : ಯುವ ಕಿರುತೆರೆ ನಟ ಅಮನ್ ಜೈಸ್ವಾಲ್ ಮೃತ್ಯು

ಮುಂಬೈ: ಇಲ್ಲಿನ ಜೋಗೇಶ್ವರಿ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಟಿವಿ ಸೀರಿಯಲ್ ನಟ ಅಮನ್ ಜೈಸ್ವಾಲ್ (23) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಅಮನ್ ‌’ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾಗಿದ್ದರು.

ಅಪಘಾತದಲ್ಲಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕಾಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೂಳೂರು ಸರ್ವೇಶ್ವರ ಟ್ರೋಫಿ-2025 – ಇಂದು ಸಂಜೆ  30 ಗಜಗಳ ಹೊನಲು ಬೆಳಕಿನ ಪಂದ್ಯಾಟ – vishwanews24

ಟ್ರಕ್ ಚಾಲಕನ ವಿರುದ್ಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply