ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ; 9 ಪ್ರಯಾಣಿಕರು ಅಪಾಯದಿಂದ ಪಾರು – vishwanews24
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ; 9 ಪ್ರಯಾಣಿಕರು ಅಪಾಯದಿಂದ ಪಾರು
ಬ್ರಹ್ಮಾವರ : ಗುರುವಾರ ಮುಂಜಾನೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಳಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 9 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೇರಳದಿಂದ ಗೋವಾಕ್ಕೆ ತೆರಳುತ್ತಿದ್ದಾಗ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದೆ. ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಪ್ರದೇಶದ ಬಳಿ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದೆ. ಒಂಬತ್ತು ಮಂದಿ ಪ್ರಯಾಣಿಕರು ಗಂಭೀರ ಗಾಯಗಳಿಂದ ಪಾರಾಗಿದ್ದಾರೆ.
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ : ದಿನೇಶ್ ಗುಂಡೂರಾವ್ – vishwanews24
ಸ್ಥಳೀಯ ನಿವಾಸಿಗಳು ಮತ್ತು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಸ್ಥಳಕ್ಕೆ ಧಾವಿಸಿ ಉರುಳಿಬಿದ್ದ ವಾಹನದಿಂದ ಪ್ರಯಾಣಿಕರನ್ನು ರಕ್ಷಿಸಲು ಸಹಾಯ ಮಾಡಿದರು.
