ಬ್ರಹ್ಮಾವರ : ವಿಶಾಲಾ ಗಾಣಿಗ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕಾಗಿ ಎಸ್.ಪಿ.ಗೆ ಮನವಿ -Vishwanews24

Featured, ಉಡುಪಿ

ಬ್ರಹ್ಮಾವರ : ವಿಶಾಲಾ ಗಾಣಿಗ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕಾಗಿ ಎಸ್.ಪಿ.ಗೆ ಮನವಿ -Vishwanews24

ಬ್ರಹ್ಮಾವರ: ಬ್ರಹ್ಮಾವರ ಸಮೀಪ ಕುಮ್ರಗೋಡು ಸಮೀಪ ಅಪಾರ್ಟ್ಮೆಂಟ್ ನಲ್ಲಿ ನಿಗೂಢ ರೀತಿಯಲ್ಲಿ ಕೊಲೆಯಾದ ವಿಶಾಲಾ ಗಾಣಿಗ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಕೋರಿ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ ರಿ. ಮೂಡುಕೇರಿ, ಬಾರ್ಕೂರು ಇದರ ಆಡಳಿತ ಮಂಡಳಿಯ ನಿಯೋಗ ಇಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಪ್ರಕರಣದ ಕುರಿತು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿದ್ದು, ಆರೋಪಿಗಳನ್ನು ಬಂಧಿಸುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದು ನ್ಯಾಯ ಒದಗಿಸಬೇಕು ಎಂದು ಸಂಘಟನೆಯ ಪರವಾಗಿ ವಿನಂತಿಸಲಾಯಿತು.

ತನಿಖೆಗಾಗಿ ಈಗಾಗಲೇ 4 ವಿಶೇಷ ತಂಡವನ್ನು ರಚಿಸಿದ್ದು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಎಸ್.ಪಿ. ಯವರು ತಿಳಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ವಾಸುದೇವ ಬೈಕಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಅಚ್ಲಾಡಿ, ಮಾಜಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ, ಉಪಾಧ್ಯಕ್ಷ ಸೂರ್ಯನಾರಾಯಣ ಗಾಣಿಗ, ಉದಯ ಕೆ., ಜಂಟಿ ಕಾರ್ಯದರ್ಶಿ ರಾಮಕೃಷ್ಣ ಹಾರಾಡಿ, ಸೌಜನ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.