ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ: ನಾಲ್ಕು ತನಿಖಾ ತಂಡ ರಚನೆ : ಎಸ್ಪಿ ವಿಷ್ಣುವರ್ಧನ್ -Vishwanews24
ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ: ನಾಲ್ಕು ತನಿಖಾ ತಂಡ ರಚನೆ : ಎಸ್ಪಿ ವಿಷ್ಣುವರ್ಧನ್ -Vishwanews24
ಬ್ರಹ್ಮಾವರ: ಉಪ್ಪಿನಕೋಟೆ ಕುಮ್ರಗೋಡು ಗ್ರಾಮದಲ್ಲಿರುವ ಮಿಲನ ರೆಸಿಡೆನ್ಸಿಯ ಫ್ಲ್ಯಾಟ್‌ನಲ್ಲಿ ನಡೆದಿರುವ ವಿಶಾಲಾ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ತಿಳಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್, ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಕಟ್ಟಡದಲ್ಲಿ ಯಾವುದೇ ಸಿಸಿ ಟಿವಿ ಅಳವಡಿಸದೆ ಇದ್ದು ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿಗಳ ಪರಿಶೀಲನೆ ನಡೆಯುತ್ತಿದೆ. ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
