ಬ್ರಿಟನ್ ರಾಣಿ ಎಲಿಜಬೆತ್ 2 ನಿಧನದ ಹಿನ್ನೆಲೆ, ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ – Vishwanews24

Featured, ರಾಷ್ಟ್ರ ನ್ಯೂಸ್

ಬ್ರಿಟನ್ ರಾಣಿ ಎಲಿಜಬೆತ್ 2 ನಿಧನದ ಹಿನ್ನೆಲೆ, ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ 2 ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಶುಕ್ರವಾರ (ಸೆಪ್ಟೆಂಬರ್ 9, 2022) ಘೋಷಿಸಿದೆ.

‘ಹರ್ ಮೆಜೆಸ್ಟಿ ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ನಾರ್ದರ್ನ್ ಐರ್ಲೆಂಡ್ 2022 ರ ಸೆಪ್ಟೆಂಬರ್ 8 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆಯನ್ನು ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.

‘ಶೋಕಾಚರಣೆಯ ದಿನದಂದು, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಆ ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನೂಪುರ್​ ಶರ್ಮಾ ಬಂಧನಕ್ಕೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ – Vishwanews24

Leave a Reply