ಬ್ರಿಟನ್ ರೂಪಾಂತರಿ ಕೊರೊನಾ : ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ -Vishwanews24
ಮುಂಬೈ : ತೀವ್ರ ಭೀತಿ ಹುಟ್ಟಿಸಿರುವ ಬ್ರಿಟನ್ ರೂಪಾಂತರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ರೂಪಾಂತರಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಜನವರಿ 31 ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ದೇಶದಲ್ಲಿ ಈಗಾಗಲೇ ರೂಪಾಂತರಿ ಕೊರೊನಾ ವೈರಸ್ ಎಂಟ್ರಿ ಆಗಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 20 ಜನರಲ್ಲಿಈಗಾಗಲೇ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಜನವರಿ 31 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
