ಬ್ರೈನ್ ಟ್ಯೂಮರ್‌ – ರಾಜ್ಯಮಟ್ಟದ ಕ್ರಿಕೆಟ್‌ ಆಟಗಾರ ಪೆರ್ಡೂರಿನ ರಕ್ಷಿತ್ ಶೆಟ್ಟಿ ನಿಧನ – Vishwanews24

Featured, ಉಡುಪಿ

ಬ್ರೈನ್ ಟ್ಯೂಮರ್‌ – ರಾಜ್ಯಮಟ್ಟದ ಕ್ರಿಕೆಟ್‌ ಆಟಗಾರ ಪೆರ್ಡೂರಿನ ರಕ್ಷಿತ್ ಶೆಟ್ಟಿ ನಿಧನ

ಹೆಬ್ರಿ: ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ಭಾನುವಾರ ನಡೆದಿದೆ.

ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಮೃತ ಯುವಕ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ ಕ್ರಿಕೆಟ್ ಆಟವನ್ನು ಪ್ರಾರಂಭಿಸಿದ್ದರು. ಬಳಿಕ ವಿವಿಧ ಜಿಲ್ಲಾ ಮಟ್ಟದ ತಂಡಗಳಲ್ಲಿ ಆಡಿ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ರಾಜ್ಯ ಮಟ್ಟದಲ್ಲಿಯೂ ರಕ್ಷಿತ್ ಗುರುತಿಸಿಕೊಂಡಿದ್ದರು.

ಬೌಲಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಅವರು, ತಮ್ಮ ಆಕರ್ಷಕ ಶೈಲಿಯ ಬೌಲಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳಿಂದ ಪ್ರಶಂಸೆ ಗಿಟ್ಟಿಸಿಕೊಂಡಿದ್ದರು. ಎಸ್.ಝಡ್‌‌.ಸಿ.ಸಿ ಮತ್ತು ಎಮ್‌.ಬಿ.ಸಿ.ಸಿ ತಂಡಗಳ ಪರವಾಗಿ ಆಡಿದ್ದರು.

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ – Vishwanews24

Leave a Reply