ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು – vishwanews24
ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು
ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ ಶಿಕ್ಷಕರಾದ ಮೌಲವಿ ಶಾಹಿದುಲ್ಲಾ ಅವರ ಪುತ್ರ ಎಂದು ತಿಳಿದು ಬಂದಿದೆ.
ಕುಟುಂಬದ ಮಾಹಿತಿ ಪ್ರಕಾರ, ತಾಯಿ ಮತ್ತು ತಮ್ಮನೊಂದಿಗೆ ರೆಸಾರ್ಟ್‌ನಲ್ಲಿ ಇದ್ದ ಬಾಲಕ, ಕೆಲ ಹೊತ್ತು ತಾಯಿಯು ಸ್ಥಳದಲ್ಲಿಲ್ಲದ ಸಂದರ್ಭದಲ್ಲೇ ಸುಮಾರು ಐದು ಅಡಿ ಆಳದ ಈಜುಕೊಳಕ್ಕೆ ಜಾರಿ ಬಿದ್ದಿದ್ದಾನೆ ಎನ್ನಲಾಗಿದೆ.
ಉಡುಪಿ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ – vishwanews24
ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕ ಬಿದ್ದಾಗ ತಕ್ಷಣ ತಾಯಿ ಆತನನ್ನು ಮೇಲಕ್ಕೆ ಎತ್ತಿದ್ದಾರೆ ಆದರೆ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಆತ ಸಾವನಪ್ಪಿದ್ದ ಭಟ್ಕಳ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಲಕ್ಕಿ ಸ್ಕೀಮ್ ಗೊಂದಲ ; ಕಂಪೆನಿ ಕಚೇರಿಗೆ ಗ್ರಾಹಕರ ಮುತ್ತಿಗೆ – vishwanews24
