ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

Featured, ರಾಜ್ಯ ನ್ಯೂಸ್

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌

ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ, ಮುಸ್ಲಿಂ ಸಂಘರ್ಷಕ್ಕೆ ಟ್ಟಿಸ್ಟ್ ಸಿಕ್ಕಿದೆ. ಕಾರಿನಲ್ಲಿ ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್‌ ಮಾಡಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿಬಂದಿದೆ.

ಯುವತಿಯನ್ನ ಅಪಹರಿಸುವ ವೇಳೆ ಹಿಂದೂಪರ ಕಾರ್ಯಕರ್ತರು ಕಾರನ್ನು ತಡೆದು ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದರು. ಆದರೇ ಗ್ರಾಮೀಣ ಠಾಣೆ ಪೊಲೀಸರು ಹಿಂದೂ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದನ್ನ ವಿರೋಧಿಸಿ ಹಿಂದೂಪರ ಕಾರ್ಯಕರ್ತರು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಬಂಧಿತ ಶಾಹೀದ್ ವಿರುದ್ಧ ಹಿಂದೂಪರ ಕಾರ್ಯಕರ್ತರು ಲವ್ ಜಿಹಾದ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಈ ಸಂಬಂಧ ಸಂತ್ರಸ್ತ ಯುವತಿ ಮುಸ್ಲಿಂ ಯುವಕನ ವಿರುದ್ಧ ದೂರು ನೀಡಿದ್ದು, ಬಲವಂತವಾಗಿ ಕಾರಿನಲ್ಲಿ ಅಪಹರಿಸಿ, ಬಳಿಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಳು. ಅದರಂತೆ ಪೊಲೀಸರು ಶಾಹೀದ್ ಎಂಬಾತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇಬ್ಬರು ಕೂಡ ಭಟ್ಕಳದ ಸೂಪರ್ ಮಾರ್ಕೆಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶಾಹೀದ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ನಿನ್ನೆ ಮಾತನಾಡಬೇಕು ಬಾ ಎಂದು ಕರೆದು ಬಲವಂತವಾಗಿ ಕಾರಿನಲ್ಲಿ ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿರೋದಾಗಿ ಯುವತಿ ದೂರು ನೀಡಿದ್ದಾಳೆ.

Leave a Reply