ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ತಮ್ಮ ಕೃತ್ಯಗಳಿಗೆ ಜವಾಬ್ದಾರಿಯುತವಾಗಿರಬೇಕು : ಪಾಕ್ ಗೆ ಪ್ರಧಾನಿ ಮೋದಿ -Vishwanews24
ಬಿಶ್ಕೇಕ್: ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ತಮ್ಮ ಕೃತ್ಯಗಳಿಗೆ ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ತಿರುಗೇಟು ನಿಡಿದ್ದಾರೆ.
ಕಿರ್ಗಿಸ್ತಾನದ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ (ಎಸ್ ಸಿಒ)ಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಭಾರತ ಎಸ್ ಸಿಒ ಶೃಂಗದ ಖಾಯಂ ಸದಸ್ಯತ್ವ ಪಡೆದು 12 ವರ್ಷಗಳಾಗುತ್ತಿವೆ. ಎಸ್ ಸಿಒದ ಪ್ರತಿಯೊಂದು ಕಾರ್ಯಚಟುವಟಿಕೆಯಲ್ಲೂ ನಾವು ಸಕಾರಾತ್ಮಕ ಕೊಡುಗೆ ನೀಡಿದ್ದೇವೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಎಸ್ ಸಿಒ ಪಾತ್ರ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿ ತೋರಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದರು.
ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವ, ನೆರವು ನೀಡುವ ಮತ್ತು ಬೆಂಬಲಿಸುವ ರಾಷ್ಟ್ರಗಳಿಗೆ ಜವಾಬ್ದಾರರಾಗಿರಬೇಕು ಎಂದು ಹೇಳಿದರು. ಭಾರತ ಭಯೋತ್ಪಾದನೆ ಮುಕ್ತ ಸಮಾಜಕ್ಕಾಗಿ ನಿಂತಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು ಬಲಪಡಿಸಲು ಜಾಗತಿಕ ಒಗ್ಗಟ್ಟು ಅಗತ್ಯ ಎಂದರು.
ಚೀನಾದ ಪ್ರಧಾನಿ ಕ್ಸಿ ಜಿನ್ ಪಿಂಗ್ ಜೊತೆಗಿನ ನಿಯೋಗ ಮಟ್ಟದ ಮಾತುಕತೆಯ ಸಮಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, “ಶಾಂತಿಯುತ ಮಾತುಕತೆಗಳಿಗೆ ನಾವು ಬದ್ಧರಾಗಿದ್ದೇವೆ” ಮತ್ತು ಈ ಪ್ರಯತ್ನದಲ್ಲಿ ಭಾರತ ಮುಂದಡಿ ಇಟ್ಟಿದೆ, ಆದರೆ “ಈ ಪ್ರಯತ್ನಗಳು ಪಾಕಿಸ್ತಾನದಿಂದ ಹಳಿತಪ್ಪಿದೆ. ಮೊದಲು ಪಾಕಿಸ್ತಾನ ಭಯೋತ್ಪಾದನಾ ಮುಕ್ತ ವಾತಾವರಣ ಸೃಷ್ಟಿಸಬೇಕು ಎಂದು ತಿಳಿಸಿದರು.
ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೇರಿದಂತೆ ಎಸ್ಸಿಒ ನಾಯಕರೊಂದಿಗೆ ಔಪಚಾರಿಕವಾಗಿ ಭಾವಚಿತ್ರ ತೆಗೆದುಕೊಳ್ಳುವ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಂಡರು. ಕಿರ್ಗಿಸ್ತಾನದ ಗಣರಾಜ್ಯ ಅಧ್ಯಕ್ಷ ಜೀನ್ ಬೆಕೋವ್ ಅವರು ಪ್ರಸಕ್ತ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.

