ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

Featured, ರಾಜ್ಯ ನ್ಯೂಸ್

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  ..

ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು..

ಇಂದಿರಾ ಗಾಂಧಿ ಅಂಬಾಸಿಡರ್ ಕಾರಿನಲ್ಲಿ ಓಡಾಡುತ್ತಿದ್ದರು ಇವರು ಅಂತ ಕಾರು ಮೋದಿ ಉಪಯೋಗಿಸಲಿ.. 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಕುಟುಕಿದ್ದ ಪ್ರಧಾನಿ ಮೋದಿಗೆ ತಿರುಗೇಟು ನೀಡಿದರು. ಪಿಎಂ ಎಂದರೆ ನಾವು ಪ್ರಧಾನಮಂತ್ರಿ ಎಂದು ತಿಳಿದುಕೊಂಡಿದ್ದೇವೆ. ಇವರು ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು. ಕರ್ನಾಟಕ ರಾಜ್ಯದ ರಾಜಕಾರಣದ ಬಗ್ಗೆ ಕಮ್ಮಿ ಮಾತಾಡೋದು ಒಳ್ಳೆಯದು. ನರೇಂದ್ರ ಮೋದಿಯವರನ್ನು ನಾನು ಯಾವಾಗ ಬೇಕಾದರೂ ಇಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳಿದ್ದಾರೆ. ಕರ್ನಾಟಕ ಸಿಎಂ ಕುರ್ಚಿ ಬಗ್ಗೆ ಮಾತಾಡುವ ಮೊದಲು, ಅವರ ಕುರ್ಚಿ ಗಟ್ಟಿಯಾಗಿದೆಯೇ ಎಂದು ನೋಡಿಕೊಳ್ಳಲಿ ಎಂದಿದ್ದಾರೆ.

ಇದನ್ನೂ ಓದಿ:

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಎಪ್‍ಸ್ಟೀನ್ ಫೈಲ್ಸ್‌ನಲ್ಲಿ ಇವರ ಲೀಲೆಗಳು ಹೊರಗಡೆ ಬರುತ್ತೆ. ಆಗ ಚೇರ್‌ ಹೇಗೆ ಉಳಿಸಿಕೊಳ್ಳುತ್ತಾರೆ ಎಂದು ಜನರಿಗೆ ಹೇಳಿದರೆ ಒಳ್ಳೆಯದು. ಮೊದಲು ಅದಕ್ಕೆ ಉತ್ತರ ಕೊಡಲಿ. ಈಗ ಗುಜರಾತ್ ಮಾಡೆಲ್ ಮರೆತು ಬಿಟ್ಟಿದ್ದಾರೆ. 12 ವರ್ಷಗಳ ಅರಾಜಕತೆ ಸೃಷ್ಟಿ ಮಾಡಿದವರು ಇವರು. ಬಿಹಾರದಲ್ಲಿ ನಿತೀಶ್ ಕುಮಾರ್, ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ, ಪ್ರಕಾಶಸಿಂಗ್ ಬಾದಲ್, ಎನ್‍ಸಿಪಿ ಯಾವ ರೀತಿ ಮುಗಿಸಿದರು. ಇದಕ್ಕೆಲ್ಲ ಕಾರಣ ಭಸ್ಮಾಸುರ ಆಗಿರುವ ನರೇಂದ್ರ ಮೋದಿ. ಅವರು ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು ಎಂದು ಕುಟುಕಿದ್ದಾರೆ.

ರಾಷ್ಟ್ರ ಅಧೋಗತಿಗೆ ಬಂದಿದೆ ಅನ್ನೋದು ಯಾರಿಗೂ ಕೂಡ ಗೊತ್ತಾಗ್ತಿಲ್ಲ. ಫೆ.28 ರಂದು ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾದ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿ ಬಹಳ ಸ್ಪಷ್ಟವಾಗಿ ಹೇಳಿದ್ದರು. ದೇಶ ಬಹಳ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಕ್ಕಿಹಾಕಿಕೊಳ್ಳುತ್ತೆ, ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ಕೊಟ್ಟಿದ್ದರು. ಆದರೆ ಅವರ ಮಾತನ್ನು ಬಾಲಿಶ ಅಂತ ತಳ್ಳಿ ಹಾಕಿದ್ದರು. ಇವರಿಗೆ ನಾಲ್ಕು ತಿಂಗಳು ಚುನಾವಣೆ ಮಾಡಬೇಕಾಗಿತ್ತು. ಎಲ್ಲಿ ಹೋದರೂ ಕೂಡ ವಿರೋಧ ಪಕ್ಷವನ್ನು ನಂಬಬೇಡಿ, ಕಾಂಗ್ರೆಸ್ ನಂಬಬೇಡಿ ಸುಳ್ಳು ಹೇಳ್ತಿದ್ದಾರೆ ಎಂದಿದ್ದರು. ಯಾವುದೇ ತೊಂದರೆ ಆಗಲ್ಲ ಎಂದು ಭಾಷಣ ಬಿಗಿದರು.

ಇದನ್ನೂ ಓದಿ:

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಈಗ ಪೆಟ್ರೋಲ್ ಮಿತವ್ಯಯ ಮಾಡಿ ಎಂದು ಹೇಳುತ್ತಿದ್ದಾರೆ. ಚಿನ್ನ ಖರೀದಿ ಮಾಡಬೇಡಿ, ಫಾರಿನ್ ಟೂರ್‌ಗೆ ಹೋಗಬೇಡಿ ಎನ್ನುತ್ತಿದ್ದಾರೆ. ಇವರು ಏನು ಮಾಡುತ್ತಿದ್ದಾರೆ? ಕಳೆದ 12 ವರ್ಷದಿಂದ ಇವರಿಗೆ ಯಾವ ಹೊಣೆಗಾರಿಕೆ ಇತ್ತು ಎಂದು ಹೇಳಲಿ. ಐದು ತಿಂಗಳ ಕಾಲ ಬಹಳ ಹೊಣೆಗಾರಿಕೆ ಹೊತ್ತಿದ್ದೇನೆ. ಈಗ ನನ್ನ ಕೈಯಲ್ಲಿ ಆಗಲ್ಲ ಅಂತ ಹೇಳುತ್ತಿದ್ದಾರೆ.

ಇವರಿಗೆ ಎಂಟು ಸಾವಿರ ಕೋಟಿ ಏರೋಪ್ಲೇನ್ ಬೇಕು. ಮಿತವ್ಯಯ ಮಾಡಬೇಕಾದರೆ ಇವರು ಕಮರ್ಷಿಯಲ್ ಫ್ಲೈಟ್‌ಲ್ಲಿ ಓಡಾಡಲಿ. ಸಣ್ಣ ಕಾರಿನಲ್ಲಿ ಓಡಾಡಲಿ, ಇಂದಿರಾ ಗಾಂಧಿ ಅಂಬಾಸಿಡರ್ ಕಾರಿನಲ್ಲಿ ಓಡಾಡುತ್ತಿದ್ದರು. ಇವರು ಅಂತ ಕಾರು ಉಪಯೋಗಿಸಲಿ, ಲಾಲ್ ಬಹದ್ದೂರ್ ಶಾಸ್ತ್ರಿ ಫಿಯೆಟ್ ಕಾರ್ ಇಟ್ಕೊಂಡಿದ್ರು. ಅಂತದ್ರಲ್ಲಿ ಇವರು ಓಡಾಡಲಿ. ಇವರು ಮಾಡೋದೆಲ್ಲ ಮಾಡಬಹುದು. ಜನ ಸಾಮಾನ್ಯರು ಜೀವನ ನಡೆಸುವುದಕ್ಕೆ ಕಷ್ಟ ಆಗ್ತಿದೆ ಅನ್ನೋದು ಇವರಿಗೆ ಅರ್ಥ ಆಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

Leave a Reply