ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ : ಮೋದಿಗೆ ಇಮ್ರಾನ್ ಪತ್ರ -Vishwanews24
ಇಸ್ಲಾಮಾಬಾದ್ : ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಹೇಳಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತದ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಪಾಕ್ ಪತ್ರಿಕೆಗಳು ವರದಿ ಮಾಡಿವೆ.
ಎರಡನೇ ಅವಧಿಗೆ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಮೋದಿ ಅವರನ್ನು ಅಭಿನಂದಿಸಿರುವ ಇಮ್ರಾನ್ ಖಾನ್, ಭಾರತ ಮತ್ತು ಪಾಕ್ ನಡುವೆ ಇರುವ ಕಾಶ್ಮೀರ ಸೇರಿ ಎಲ್ಲ ವಿವಾದಗಳನ್ನು ಪರಿಹರಿಸಿಕೊಳ್ಳಲು ಪಾಕ್ ಉತ್ಸುಕವಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಪಾಕಿಸ್ತಾನವು ದಕ್ಷಿಣಾ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮೂಡುವಂತೆ ಮಾಡಲು ಬದ್ಧವಾಗಿದೆ. ಆದ್ದರಿಂದ ಈ ವಿಷಯವನ್ನು ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
