ಭಾರತಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿಯಿಂದಾಗಿ ಯಾವುದೇ ಪ್ರಯೋಜನವಿಲ್ಲ , ಭಾರತ ಅಮೆರಿಕದೊಂದಿಗೆ ಯಾವುದೇ ಆಮದು ಒಪ್ಪಂದಕ್ಕೆ ಮುಂದಾಗಬಾರದು : ಸಿದ್ದರಾಮಯ್ಯ – Vishwanews24
ಕಲಬುರ್ಗಿ : “ಭಾರತಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿಯಿಂದಾಗಿ ಯಾವುದೇ ಪ್ರಯೋಜನವಿಲ್ಲ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಭಾರತಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿಯಿಂದಾಗಿ ಯಾವುದೇ ಪ್ರಯೋಜನವಿಲ್ಲ. ಅಮೆರಿಕಕ್ಕೆ ಮೋದಿಯೂ ಭೇಟಿ ನೀಡಿದ್ದರು, ಅದರಿಂದಾಗಿ ಯಾವುದಾದರೂ ಲಾಭವಾಯಿತೇ” ಎಂದು ಹೇಳಿದ್ದಾರೆ.
“ಭಾರತ ಅಮೆರಿಕದೊಂದಿಗೆ ಯಾವುದೇ ಆಮದು ಒಪ್ಪಂದಕ್ಕೆ ಮುಂದಾಗಬಾರದು” ಎಂದು ಆಗ್ರಹಿಸಿದರು.
‘ಬಿಜೆಪಿಯಲ್ಲಿರುವ ಅನೇಕರು ಅವರ ಪಕ್ಷ ತೊರೆಯಲು ಸಿದ್ದರಾಗಿದ್ದಾರೆ. ಬಿಜೆಪಿಯಲ್ಲಿ ತಳಮಳ ಶುರುವಾಗಿದೆ. ಅಧಿಕಾರಕ್ಕಾಗಿ ಕಚ್ಚಾಟವೂ ಆರಂಭವಾಗಿದೆ. ಅವರ ಈ ಕಚ್ಚಾಟದಿಂದಾಗಿ ಸರ್ಕಾರ ಬಿದ್ದಲ್ಲಿ ಮತ್ತೆ ಅಧಿಕಾರ ಹಿಡಿಯುವ ಯೋಚನೆ ಇಲ್ಲ. ಇದನ್ನು ಕಾಂಗ್ರೆಸ್ ಸದುಪಯೋಗ ಮಾಡಿಕೊಳ್ಳುವುದಿಲ್ಲ. ಆದರೆ ಬಿಜೆಪಿಗೇ ನಷ್ಟವಾಗಲಿದೆ” ಎಂದು ಅವರು ಅಭಿಪ್ರಾಯಪಟ್ಟರು.
