ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

Featured, ರಾಷ್ಟ್ರ ನ್ಯೂಸ್

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್, (PVSM, AVSM, VM, VSM) ಅವರನ್ನು ನೇಮಕ ಮಾಡಲಾಗಿದೆ.

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಅಕ್ಟೋಬರ್ 31 ರ ಮಧ್ಯಾಹ್ನದಿಂದ ‘ಏರ್ ಚೀಫ್ ಮಾರ್ಷಲ್ ಹುದ್ದೆಯನ್ನು ಅಲಂಕರಿಸಲಿದ್ದು, 2028 ರ ಡಿಸೆಂಬರ್ 31 ರವರೆಗೆ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ರಾಷ್ಟ್ರಪತಿಗಳ ಅನುಮೋದನೆಯೊಂದಿಗೆ ಹೊರಡಿಸಲಾದ ಅಧಿಕೃತ ಆದೇಶದ ಪ್ರಕಾರ, ಪ್ರಸ್ತುತ 28ನೇ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು 2026 ರ ಅಕ್ಟೋಬರ್ 31 ರಂದು ನಿವೃತ್ತರಾಗಲಿದ್ದು, ಅವರ ಉತ್ತರಾಧಿಕಾರಿಯಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

 

Leave a Reply